Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:17
9 ತಿಳಿವುಗಳ ಹೋಲಿಕೆ  

ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.


ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು