Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:27 - ಕನ್ನಡ ಸತ್ಯವೇದವು C.L. Bible (BSI)

27 ರಣಹದ್ದಿಗೆ ನಿನ್ನಪ್ಪಣೆ ಬೇಕೋ ಮೇಲೆ ಹಾರುವುದಕೆ? ನಿನ್ನ ಸಮ್ಮತಿ ಬೇಕೋ ಉನ್ನತ ಸ್ಥಳದಲ್ಲಿ ಗೂಡು ಕಟ್ಟುವುದಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವದು ನಿನ್ನ ಅಪ್ಪಣೆಯಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:27
11 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು I ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು II


ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಗರುಡ, ಬೆಟ್ಟದ ಹದ್ದು,


ಗಿಡುಗವು ರೆಕ್ಕೆ ಹರಡುವುದನು ದಕ್ಷಿಣದಿಕ್ಕಿಗೆ ಹಾರಿ ವಲಸೆಹೋಗುವುದನು ನಿನ್ನಿಂದ ಕಲಿತದೆಂತು?


ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ.


ಅವು ಯಾವುವೆಂದರೆ: ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಯುವಕ-ಯುವತಿಯರ ಪರಸ್ಪರ ಆಕರ್ಷಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು