Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಅಡವಿಯನೆ ಮನೆಯನ್ನಾಗಿಸಿದವನು ನಾನು ಸವಳುಬಯಲನೇ ಅದರ ನಿವಾಸವಾಗಿಸಿದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ ಸವುಳು ಭೂವಿುಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ. ಸವಳುಬಯಲನ್ನು ಅದರ ವಾಸ ಸ್ಥಳವಾಗಿಯೂ ನೇಮಿಸಿದ್ದು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:6
9 ತಿಳಿವುಗಳ ಹೋಲಿಕೆ  

ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ಅಡವಿಯಲ್ಲೆ ಪಳಗಿದ, ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿರುವೆ. ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯೂ ಅದನ್ನು ಬದಿಗೊತ್ತುವಂತಿಲ್ಲ ಅದನ್ನು ಹುಡುಕುವವುಗಳೆಲ್ಲ ಆಯಾಸಪಡಬೇಕಾಗಿಲ್ಲ. ಅವಳ ತಿಂಗಳಲ್ಲಿ ಅವಳನ್ನು ಸುಲಭವಾಗಿ ದೊರಕಿಸಿಕೊಳ್ಳುವುವು.


ಆ ಬಡವರ ಪಾಡು ಅಡವಿಯ ಕಾಡುಕತ್ತೆಗಳಿಗೆ ಸಮಾನ ಹೊಟ್ಟೆಪಾಡಿಗಾಗಿ ಕೂಳನ್ನು ಹುಡುಕುತ್ತಾರೆ ಬೆಳಗಿನಿಂದ ಅವರ ಮಕ್ಕಳಿಗೆ ಆಹಾರ ಒದಗಿಸುತ್ತದೆ ಅರಣ್ಯ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.


ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.


ಅದು ಧಿಕ್ಕರಿಸುತ್ತದೆ ಊರಗದ್ದಲವನು ಅದು ಕೇಳಿದ್ದಿಲ್ಲ ಓಡಿಸುವವನ ಕೂಗನು.


ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು