Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:11 - ಕನ್ನಡ ಸತ್ಯವೇದವು C.L. Bible (BSI)

11 ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೃಗೇಂದ್ರನು ಆಹಾರವಿಲ್ಲದೆ ಸತ್ತು ಸಿಂಹದ ಮರಿಗಳು ಚದರಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:11
17 ತಿಳಿವುಗಳ ಹೋಲಿಕೆ  

ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು?


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.


ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು