Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:12 - ಕನ್ನಡ ಸತ್ಯವೇದವು C.L. Bible (BSI)

12 ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿಯ ಬಂತು. ಅದು ಗುಸುಗುಸಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಒಂದು ಸಂದೇಶವು ನನಗೆ ರಹಸ್ಯವಾಗಿ ತಿಳಿಸಲ್ಪಟ್ಟಿತು; ನನ್ನ ಕಿವಿಗಳಿಗೆ ಅದು ಗುಸುಗುಸು ಸದ್ದಾಗಿ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:12
5 ತಿಳಿವುಗಳ ಹೋಲಿಕೆ  

ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.


“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು