ಯೋಬ 4:19 - ಕನ್ನಡ ಸತ್ಯವೇದವು C.L. Bible (BSI)19 ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ? ಅಧ್ಯಾಯವನ್ನು ನೋಡಿ |