Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:3 - ಕನ್ನಡ ಸತ್ಯವೇದವು C.L. Bible (BSI)

3 ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ, ನೀನು ಅನೇಕರನ್ನು ಶಿಕ್ಷಿಸಿ ಜೋಲುಬಿದ್ದ ಕೈಗಳನ್ನು ಬಲಗೊಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನೇ, ನೀನು ಅನೇಕರಿಗೆ ಉಪದೇಶಿಸಿರುವೆ. ನೀನು ಬಲಹೀನನ ಕೈಗಳಿಗೆ ಶಕ್ತಿಯನ್ನು ಕೊಟ್ಟಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:3
21 ತಿಳಿವುಗಳ ಹೋಲಿಕೆ  

ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.


ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.


ಕುರುಡನಿಗೆ ನಾನು ಕಣ್ಣಾಗಿದ್ದೆ ಕುಂಟನಿಗೆ ನಾನು ಕಾಲಾಗಿದ್ದೆ.


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


ಜನರು ನನ್ನ ಮಾತಿಗೆ ಕಿವಿಗೊಡಲು ಕಾದಿರುತ್ತಿದ್ದರು ನನ್ನಾಲೋಚನೆಯನು ಅರಿಯಲು ನಿಶ್ಯಬ್ದವಾಗಿರುತ್ತಿದ್ದರು.


ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು