Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಡವಿಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:4
15 ತಿಳಿವುಗಳ ಹೋಲಿಕೆ  

ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.


ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!


ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.


ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು