Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:9 - ಕನ್ನಡ ಸತ್ಯವೇದವು C.L. Bible (BSI)

9 ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರ ಶ್ವಾಸದಿಂದ ನಾಶವಾಗುತ್ತಾರೆ, ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:9
13 ತಿಳಿವುಗಳ ಹೋಲಿಕೆ  

ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು.


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.


ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.


ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು