Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:10 - ಕನ್ನಡ ಸತ್ಯವೇದವು C.L. Bible (BSI)

10 ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನನ್ನು ನೀನೇ ಮಹಿಮೆಘನತೆಗಳಿಂದ ಭೂಷಿಸಿಕೊಂಡು ಪ್ರಭಾವಮಹತ್ತುಗಳನ್ನು ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:10
16 ತಿಳಿವುಗಳ ಹೋಲಿಕೆ  

ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II


ಕುದುರೆಗೆ ಶಕ್ತಿಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಕಟ್ಟಿದವನು ನೀನೋ?


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು