Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:23 - ಕನ್ನಡ ಸತ್ಯವೇದವು C.L. Bible (BSI)

23 ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಓಹೋ, ಹೊಳೆಯು ಹೊಡೆದರೂ ಅದು ಹೆದರುವದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನದಿಯು ತುಂಬಿಹರಿದರೂ ಅದು ಓಡಿಹೋಗುವುದಿಲ್ಲ. ಜೋರ್ಡನ್ ನದಿಯು ಅದರ ಮುಖಕ್ಕೆ ರಭಸದಿಂದ ಬಡಿದರೂ ಅದಕ್ಕೆ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:23
7 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II


ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.


ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು.


ಅದು ನೋಡುವಾಗ ಯಾವನಾದರು ಅದನು ಹಿಡಿಯಬಲ್ಲನೆ? ಗಾಳದಿಂದ ಯಾವನಾದರು ಅದರ ಮೂಗನು ಚುಚ್ಚಬಲ್ಲನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು