Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:4 - ಕನ್ನಡ ಸತ್ಯವೇದವು C.L. Bible (BSI)

4 “ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:4
35 ತಿಳಿವುಗಳ ಹೋಲಿಕೆ  

ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ.


ಮಂತ್ರಿಗಳೂ ಕೈಯಿಟ್ಟು ಬಾಯ ಮೇಲೆ ಮೌನತಾಳುತ್ತಿದ್ದರು ಮಾತೆತ್ತದೆ;


ನನ್ನ ಕಡೆಗೆ ಗಮನ ಕೊಡಿ ಬಾಯಿಯ ಮೇಲೆ ಕೈಯಿಟ್ಟು ನಿಬ್ಬೆರಗಾಗಿರಿ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಅವರು ಅವನಿಗೆ, “ಬಾಯಿಮುಚ್ಚಿ ಸುಮ್ಮನಿರಿ, ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದೇ ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಯೇಲರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದರು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ಯೋಬನು ಸರ್ವೇಶ್ವರಸ್ವಾಮಿಗೆ ಇಂತೆಂದನು:


ಮಣ್ಣು ಮುಕ್ಕಬೇಕಾಗಿ ಬಂದರೂ


ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ


ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು