Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:10 - ಕನ್ನಡ ಸತ್ಯವೇದವು C.L. Bible (BSI)

10 ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರುವಾಗ, ನನಗೆ ಎದುರಾಗಿ ನಿಲ್ಲಲು ಶಕ್ತರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:10
13 ತಿಳಿವುಗಳ ಹೋಲಿಕೆ  

ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


(ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ.


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು