Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:11 - ಕನ್ನಡ ಸತ್ಯವೇದವು C.L. Bible (BSI)

11 ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಸಾಲತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:11
18 ತಿಳಿವುಗಳ ಹೋಲಿಕೆ  

ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ನೀನು ಸಜ್ಜನನಾಗಿದ್ದರೆ ಅವರಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಅವರಿಗೆ ದೊರಕಿದ ಲಾಭ ಯಾವುದು?


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.


ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.


ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು