Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:4 - ಕನ್ನಡ ಸತ್ಯವೇದವು C.L. Bible (BSI)

4 ನೀನದನ್ನು ನಿನ್ನ ಚಿರದಾಸನನ್ನಾಗಿಸಿಕೊಳ್ಳುವಂತೆ ನಿನ್ನೊಡನೆ ಅದು ಒಪ್ಪಂದ ಮಾಡಿಕೊಂಡೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ ನಿನ್ನೊಂದಿಗೆ ಒಪ್ಪಂದಮಾಡಿಕೊಳ್ಳುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಅದನ್ನು ಇಡೀ ಜೀವಮಾನಕ್ಕೂ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:4
8 ತಿಳಿವುಗಳ ಹೋಲಿಕೆ  

ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.


ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ಅದನು ಹಕ್ಕಿಯಂತೆ ಆಡಿಸಬಲ್ಲೆಯಾ? ಆಟಕ್ಕೆಂದು ಹುಡುಗಿಯರಿಗೆ ಹಿಡಿದುಕೊಡಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು