Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:9 - ಕನ್ನಡ ಸತ್ಯವೇದವು C.L. Bible (BSI)

9 ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:9
6 ತಿಳಿವುಗಳ ಹೋಲಿಕೆ  

ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!


ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.


ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು.


ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು