Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:12
15 ತಿಳಿವುಗಳ ಹೋಲಿಕೆ  

ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.


ಆತನಿಗೆ ಏಳು ಗಂಡು, ಮೂರು ಹೆಣ್ಣು ಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು