Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:3 - ಕನ್ನಡ ಸತ್ಯವೇದವು C.L. Bible (BSI)

3 ‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ‘ಈ ಮೂರ್ಖ ಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:3
9 ತಿಳಿವುಗಳ ಹೋಲಿಕೆ  

ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.


“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು