Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:5 - ಕನ್ನಡ ಸತ್ಯವೇದವು C.L. Bible (BSI)

5 ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ಮೊದಲಾದರೋ ನಾನು ನಿನ್ನ ಬಗ್ಗೆ ಕೇಳಿದ್ದೆನು; ಈಗಲಾದರೋ ಕಣ್ಣಾರೆ ನಿನ್ನನ್ನು ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:5
16 ತಿಳಿವುಗಳ ಹೋಲಿಕೆ  

ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.


ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು.


‘ನಮ್ಮ ಕಿವಿಗೆ ಬಿದ್ದಿದೆ ಅದರ ಸುದ್ದಿ ಮಾತ್ರ’ ಎನ್ನುತ್ತವೆ ಅಧೋಲೋಕ ಹಾಗು ಮೃತ್ಯುಲೋಕ.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು