Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:8 - ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:8
33 ತಿಳಿವುಗಳ ಹೋಲಿಕೆ  

ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II


ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.


ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.


ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಸರ್ವೇಶ್ವರ ಮತ್ತೆ ನನಗೆ : “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು