Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:14 - ಕನ್ನಡ ಸತ್ಯವೇದವು C.L. Bible (BSI)

14 ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯುಕ್ತಿವಂತರು ಹಗಲಿನಲ್ಲೂ ಕತ್ತಲೆಗೆ ಓಡಿಹೋಗುವರು; ನಡುಮಧ್ಯಾಹ್ನದಲ್ಲಿ ಕತ್ತಲೆಯಲ್ಲೋ ಎಂಬಂತೆ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:14
13 ತಿಳಿವುಗಳ ಹೋಲಿಕೆ  

ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.


ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.


ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.


ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.


ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.


ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು