Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:21 - ಕನ್ನಡ ಸತ್ಯವೇದವು C.L. Bible (BSI)

21 ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ನಿನ್ನನ್ನು ನಿಂದನೆಯಿಂದ ತಪ್ಪಿಸುವನು. ನಾಶನದಲ್ಲಿಯೂ ನೀನು ಭಯಪಡುವ ಅಗತ್ಯವಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; ನಾಶ ಬಂದಾಗ ನೀನು ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:21
11 ತಿಳಿವುಗಳ ಹೋಲಿಕೆ  

ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.


ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು