Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:22 - ಕನ್ನಡ ಸತ್ಯವೇದವು C.L. Bible (BSI)

22 ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ನಾಶನಕ್ಕೂ ಕ್ಷಾಮಕ್ಕೂ ನಗುವಿ; ಕಾಡುಮೃಗಗಳಿಗೆ ಅಂಜಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಅಗತ್ಯವಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:22
8 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ.


ಕತ್ತಲೆಯಲಿ ಸಂಚರಿಸುವ ವಿಪತ್ತಿಗೆ I ನಡುಹಗಲಲೆ ಪೀಡಿಸುವ ಜಾಡ್ಯಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು