Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 (ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಈ ಸಂದರ್ಭದಲ್ಲಿ] ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:8
16 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.


ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಶುದ್ಧನೂ ಸತ್ಯವಂತನೂ ನೀನಾಗಿದ್ದರೆ ದೇವರ ಪ್ರಸನ್ನತೆಯನು ಅರಸಿದೆಯಾದರೆ ಆ ಸರ್ವಶಕ್ತನನು ವಿಜ್ಞಾಪಿಸಿದೆಯಾದರೆ,


ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು