Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:15 - ಕನ್ನಡ ಸತ್ಯವೇದವು C.L. Bible (BSI)

15 ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:15
20 ತಿಳಿವುಗಳ ಹೋಲಿಕೆ  

ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.


ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ.


ಕಷ್ಟಕಾಲದಲ್ಲಿ ಕಪಟಿಯನ್ನು ನಂಬುವುದು, ಮುರುಕು ಹಲ್ಲನ್ನು ಕುಂಟಕಾಲನ್ನು ನಂಬಿದಂತಾಗುವುದು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಸರೋವರದ ನೀರು ಆರಿಹೋಗುವಂತೆ ನದಿಗಳು ಬತ್ತಿಹೋಗುವಂತೆ


ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು