Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:21 - ಕನ್ನಡ ಸತ್ಯವೇದವು C.L. Bible (BSI)

21 ಅಂತೆಯೇ ನನ್ನ ವಿಷಯದಲ್ಲಿ ನೀವು ವರ್ತಿಸುತ್ತೀರಿ ನನ್ನ ಈ ವಿಪತ್ತನು ಕಂಡಕೂಡಲೇ ಹಿಂಜರಿಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈಗ ನೀವು ಹಾಗೆಯೇ ಇದ್ದೀರಿ. (ನನ್ನ) ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈಗ ನೀವು ಹಾಗೆಯೇ ಇದ್ದೀರಿ. [ನನ್ನ] ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಸಹ ಆ ತೊರೆಗಳಂತಿದ್ದೀರಿ. ನೀವು ನನ್ನ ಕಷ್ಟಗಳನ್ನು ನೋಡಿ ಭಯಗೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈಗ ನೀವು ಸಹ ಹಾಗೆಯೇ ನಿಸ್ಸಹಾಯಕರಾಗಿ ಇದ್ದೀರಿ; ಏಕೆಂದರೆ ನೀವು ನನ್ನ ವಿಪತ್ತನ್ನು ಕಂಡು ಹಿಂಜರಿಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:21
16 ತಿಳಿವುಗಳ ಹೋಲಿಕೆ  

ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.


ದಾನ ನೀಡಿರೆಂದು ನಿಮ್ಮನು ಬಿನ್ನವಿಸಿದೆನೋ? ನಿಮ್ಮಾಸ್ತಿಯಿಂದ ಲಂಚವನು ಕೋರಿದೆನೋ?


ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು