Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:22 - ಕನ್ನಡ ಸತ್ಯವೇದವು C.L. Bible (BSI)

22 ದಾನ ನೀಡಿರೆಂದು ನಿಮ್ಮನು ಬಿನ್ನವಿಸಿದೆನೋ? ನಿಮ್ಮಾಸ್ತಿಯಿಂದ ಲಂಚವನು ಕೋರಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ, ‘ನನಗಾಗಿ ಲಂಚಕೊಡಿರಿ’ ಎಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ಬಿನ್ನಹವೇನು? ನನಗೆ ದಾನಮಾಡಿರಿ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ ನನಗಾಗಿ ಲಂಚಕೊಡಿರಿ ಎಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ‘ನನಗೆ ಏನಾದರೂ ಕೊಡಿ’ ಎಂದಾಗಲಿ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚಕೊಡಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮ್ಮನ್ನು, ‘ನನಗೆ ದಾನಮಾಡಿರಿ,’ ಎಂದು ಬಿನ್ನವಿಸಿದೆನೋ? ‘ನಿಮ್ಮ ಆಸ್ತಿಯಿಂದ ನನಗಾಗಿ ಈಡು ಕೊಡಿರಿ,’ ಎಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:22
5 ತಿಳಿವುಗಳ ಹೋಲಿಕೆ  

ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅಂತೆಯೇ ನನ್ನ ವಿಷಯದಲ್ಲಿ ನೀವು ವರ್ತಿಸುತ್ತೀರಿ ನನ್ನ ಈ ವಿಪತ್ತನು ಕಂಡಕೂಡಲೇ ಹಿಂಜರಿಯುತ್ತೀರಿ.


ವಿರೋಧಿಯ ಕೈಯಿಂದ ನನ್ನನು ಬಿಡಿಸಿರೆಂದು ಕೇಳಿಕೊಂಡೆನೋ? ಹಿಂಸಕರಿಂದ ನನ್ನನು ವಿಮೋಚಿಸಿರೆಂದು ಬೇಡಿಕೊಂಡೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು