Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:26 - ಕನ್ನಡ ಸತ್ಯವೇದವು C.L. Bible (BSI)

26 ಕೇವಲ ಮಾತುಗಳಿಂದ ಖಂಡಿಸಬೇಕೆಂದಿರುವಿರೊ? ದೆಸೆಗೆಟ್ಟವನ ಮಾತು ಗಾಳಿಪಾಲಾಗತಕ್ಕದಲ್ಲವೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬರೀ ಮಾತುಗಳನ್ನು ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ? ಇನ್ನೂ ಕಟುವಾದ ಮಾತುಗಳನ್ನು ಆಡಬೇಕೆಂದಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ? ಬೇಸರದ ನನ್ನ ಮಾತುಗಳು ನಿಮಗೆ ಗಾಳಿಮಾತುಗಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:26
19 ತಿಳಿವುಗಳ ಹೋಲಿಕೆ  

“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.”


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.


“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?


ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು