Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:27 - ಕನ್ನಡ ಸತ್ಯವೇದವು C.L. Bible (BSI)

27 ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:27
20 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II


ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.


ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು