Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:1 - ಕನ್ನಡ ಸತ್ಯವೇದವು C.L. Bible (BSI)

1 “ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ವಾಯಿದೆಯುಂಟಲ್ಲವೇ. ಅವನ ದಿನಗಳು ಕೂಲಿಯವನ ದಿನಗಳಂತೆ ಕಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:1
16 ತಿಳಿವುಗಳ ಹೋಲಿಕೆ  

“ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II


ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದೆ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿ ಲೆಕ್ಕಿಸಬೇಕು.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು