Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:11 - ಕನ್ನಡ ಸತ್ಯವೇದವು C.L. Bible (BSI)

11 ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:11
20 ತಿಳಿವುಗಳ ಹೋಲಿಕೆ  

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.


ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.


ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು.


ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ಕೇವಲ ಮಾತುಗಳಿಂದ ಖಂಡಿಸಬೇಕೆಂದಿರುವಿರೊ? ದೆಸೆಗೆಟ್ಟವನ ಮಾತು ಗಾಳಿಪಾಲಾಗತಕ್ಕದಲ್ಲವೊ?


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II


ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು