Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:15 - ಕನ್ನಡ ಸತ್ಯವೇದವು C.L. Bible (BSI)

15 ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವದಕ್ಕಿಂತಲೂ ಉಸಿರುಕಟ್ಟಿ ಸಾಯುವದೇ ಲೇಸೆಂದು ಇಚ್ಫೈಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:15
12 ತಿಳಿವುಗಳ ಹೋಲಿಕೆ  

ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.


ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.


ಅವರು ಸಮಾಧಿಗೆ ಸೇರುವಾಗ ಆಗುವುದು ಅವರಿಗೆ ಅಮಿತಾನಂದ.


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು