Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:16 - ಕನ್ನಡ ಸತ್ಯವೇದವು C.L. Bible (BSI)

16 ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:16
22 ತಿಳಿವುಗಳ ಹೋಲಿಕೆ  

“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ಇಂತಿರಲು ತಿರುಗಿಸಿಬಿಡು ಅವನಿಂದ ನಿನ್ನ ದೃಷ್ಟಿಯನು ಸವಿಯಲು ಬಿಡು ಕೂಲಿಯಾಳಂತೆ ದಿನಾಂತ್ಯದ ನಲಿವನು.


ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II


ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.


ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು