Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:20 - ಕನ್ನಡ ಸತ್ಯವೇದವು C.L. Bible (BSI)

20 ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:20
21 ತಿಳಿವುಗಳ ಹೋಲಿಕೆ  

ತನ್ನ ಬಿಲ್ಲನ್ನು ಬಗ್ಗಿಸಿರುವನು ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿರುವನು.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II


ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು?


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,


ಇಲ್ಲ,ಹಾಗೆಮಾಡುವುದು ನಿನ್ನ ಕೆಟ್ಟತನ ಹೆಚ್ಚಿದುದಕ್ಕಾಗಿ. ನಿನ್ನ ಪಾಪಗಳಿಗೆ ಮಿತಿಯಿಲ್ಲದುದಕ್ಕಾಗಿ.


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು