Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:21 - ಕನ್ನಡ ಸತ್ಯವೇದವು C.L. Bible (BSI)

21 ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:21
29 ತಿಳಿವುಗಳ ಹೋಲಿಕೆ  

ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ಶೂಹ್ಯನಾದ ಬಿಲ್ದದನು ಇಂತೆಂದನು:


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು