Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:4 - ಕನ್ನಡ ಸತ್ಯವೇದವು C.L. Bible (BSI)

4 ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:4
9 ತಿಳಿವುಗಳ ಹೋಲಿಕೆ  

ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ.


ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II


ಇರುಳನ್ನು ಹಗಲೆಂದು ಸಾಧಿಸುತ್ತಿರುವರು ಕತ್ತಲಿಂದಲೇ ಬೆಳಕು ಬೇಗ ಬರಲಿದೆ ಎನ್ನುತ್ತಿರುವರು.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II


ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು