Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹುಳಗಳೂ ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. [ಬಿರಿದ] ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ; ನನ್ನ ಚರ್ಮವು ಕಜ್ಜಿಯಿಂದ ಬಿರಿದು ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:5
15 ತಿಳಿವುಗಳ ಹೋಲಿಕೆ  

ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.


ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು.


ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ.


ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು