Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:6 - ಕನ್ನಡ ಸತ್ಯವೇದವು C.L. Bible (BSI)

6 ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ದಿವಸಗಳು ಮಗ್ಗದ ಲಾಳಿಗಿಂತ ವೇಗವಾಗಿ ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:6
23 ತಿಳಿವುಗಳ ಹೋಲಿಕೆ  

ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ನನ್ನ ನಂಬಿಕೆ-ನಿರೀಕ್ಷೆ ಎಲ್ಲಿಯದು? ನನ್ನ ಭಾಗ್ಯವನ್ನು ಯಾರು ನೋಡಿಯಾರು?


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ.


“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು