Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:7 - ಕನ್ನಡ ಸತ್ಯವೇದವು C.L. Bible (BSI)

7 ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲೈ, ನನ್ನ ಜೀವವು ಗಾಳಿಯಂತಿದೆಯೆಂತಲೂ ನನ್ನ ಕಣ್ಣು ಇನ್ನೂ ಸುಖವನ್ನು ಕಾಣುವದಿಲ್ಲವೆಂತಲೂ ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:7
16 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು