Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವದಿಲ್ಲ; ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನ್ನನ್ನು ಮತ್ತೆಂದೂ ಕಾಣುವುದಿಲ್ಲ. ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:8
14 ತಿಳಿವುಗಳ ಹೋಲಿಕೆ  

ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ಬರಮಾಡುವೆಯಾ ನನ್ನನು ನಿನ್ನ ನ್ಯಾಯಸ್ಥಾನಕ್ಕೆ?


ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.


ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.


ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು