Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:9 - ಕನ್ನಡ ಸತ್ಯವೇದವು C.L. Bible (BSI)

9 ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಡ ಹರಿದು ಮಾಯವಾಗುವಂತೆ ಪಾತಾಳಕ್ಕೆ ಇಳಿದು ಹೋದವನು ತಿರಿಗಿ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:9
14 ತಿಳಿವುಗಳ ಹೋಲಿಕೆ  

ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.


ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ.


ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?


ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.


ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು