Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:10 - ಕನ್ನಡ ಸತ್ಯವೇದವು C.L. Bible (BSI)

10 ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಿನಗೆ ಬೋಧಿಸಿ ಬುದ್ಧಿಹೇಳಿ ಮನಃಪೂರ್ವಕವಾಗಿ ಮಾತಾಡುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:10
12 ತಿಳಿವುಗಳ ಹೋಲಿಕೆ  

ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು.


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು