Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:13 - ಕನ್ನಡ ಸತ್ಯವೇದವು C.L. Bible (BSI)

13 ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:13
25 ತಿಳಿವುಗಳ ಹೋಲಿಕೆ  

ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II


ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ದುರುಳರ ಸಂಘವದು ಬರಡಾದುದು ಸುಡುವುದು ಬೆಂಕಿ ಲಂಚಕೋರರ ಗುಡಾರವನು.


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ನಾನು ಇಂತೆಂದುಕೊಂಡೆ: ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು ಸರ್ವೇಶ್ವರನಲ್ಲಿ ನಾನಿತ್ತ ನಿರೀಕ್ಷೆ ವ್ಯರ್ಥವಾಯಿತು.”


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು