Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:19 - ಕನ್ನಡ ಸತ್ಯವೇದವು C.L. Bible (BSI)

19 ಇದುವೇ ಅಂಥವನಿಗೆ ಗಿಟ್ಟುವ ಸುಖ ಬೇರೆಯವರು ಮೊಳೆವರು ಅವನಿದ್ದ ಆ ನೆಲದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಆ ಬಳ್ಳಿ ಹೊಂದಿರುವ ಸಂತೋಷವೆಲ್ಲಾ ಅಷ್ಟೇ. ಬಳಿಕ ಆ ಮಣ್ಣಿನಿಂದ ಇತರ ಸಸಿಗಳು ಬೆಳೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:19
8 ತಿಳಿವುಗಳ ಹೋಲಿಕೆ  

ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು