Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:20 - ಕನ್ನಡ ಸತ್ಯವೇದವು C.L. Bible (BSI)

20 ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:20
10 ತಿಳಿವುಗಳ ಹೋಲಿಕೆ  

ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು