Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:6 - ಕನ್ನಡ ಸತ್ಯವೇದವು C.L. Bible (BSI)

6 ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು ಬರುವನು ಸತ್ಯವಂತನ ಮನೆಮಾರನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಶುದ್ಧನೂ ಒಳ್ಳೆಯವನೂ ಆಗಿದ್ದರೆ ಆತನು ಬಂದು ನಿನಗೆ ಸಹಾಯ ಮಾಡುತ್ತಾನೆ; ನಿನ್ನ ಕುಟುಂಬವನ್ನು ನಿನಗೆ ಮತ್ತೆ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:6
20 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನಿನ್ನ ಗುಡಾರಕ್ಕೆ ಗಂಡಾಂತರವಿಲ್ಲವೆಂಬ ನೆಮ್ಮದಿ ನಿನಗಿರುವುದು ನಿನ್ನ ಮಂದೆಯನು ನೀನು ನೋಡಬಂದಾಗ ಕೊರತೆ ಕಾಣಬರದು.


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.


ಕರುಣೆಯುಳ್ಳವನಿಗಾತ ಕರುಣಾಮಯಿ I ದೋಷರಹಿತನಿಗಾತ ನಿರ್ದೋಷಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು