Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:8 - ಕನ್ನಡ ಸತ್ಯವೇದವು C.L. Bible (BSI)

8 ವಿಚಾರಿಸಿ ನೋಡು ಪುರಾತನ ಕಾಲವನು ಧ್ಯಾನಿಸಿ ನೋಡು ಪೂರ್ವಜರ ಅನುಭವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಯಮಾಡಿ ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:8
15 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು:


ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.


“ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.


ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ?


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು