Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:9 - ಕನ್ನಡ ಸತ್ಯವೇದವು C.L. Bible (BSI)

9 ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು; ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:9
14 ತಿಳಿವುಗಳ ಹೋಲಿಕೆ  

ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:


ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು