Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:12 - ಕನ್ನಡ ಸತ್ಯವೇದವು C.L. Bible (BSI)

12 ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ನೀನು ಏನು ಮಾಡುತ್ತಿ ಎಂದು ಆತನನ್ನು ಕೇಳುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:12
18 ತಿಳಿವುಗಳ ಹೋಲಿಕೆ  

ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.


ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು