Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:14 - ಕನ್ನಡ ಸತ್ಯವೇದವು C.L. Bible (BSI)

14 ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನಾದರೋ ದೇವರೊಂದಿಗೆ ವಾದಿಸಿ ಆತನಿಗೆ ಉತ್ತರಕೊಡುವದಕ್ಕೆ ಮತ್ತೂ ಅಶಕ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:14
10 ತಿಳಿವುಗಳ ಹೋಲಿಕೆ  

ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು.


ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”


ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.


ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.


ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.


ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು